ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.
TSK
TSK · ಆಮೋಸ 5:17
Treasury of Scripture Knowledge references in ಕನ್ನಡ IRV.
ಹರ್ಷಾನಂದಗಳು ತೋಟಗಳಿಂದ ತೊಲಗಿವೆ. ದ್ರಾಕ್ಷಿಯ ತೋಟಗಳಲ್ಲಿ ಉತ್ಸಾಹದ ಧ್ವನಿಯೂ, ಉಲ್ಲಾಸದ ಆರ್ಭಟವೂ ಇರುವುದಿಲ್ಲ. ತುಳಿಯುವವರು ದ್ರಾಕ್ಷಿಯ ತೊಟ್ಟಿಗಳಲ್ಲಿ ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.
ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.
ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.
¶ ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.