TSK

TSK · ಆಮೋಸ 5:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.

ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.

ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?

ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.

ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;

ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.