TSK

TSK · ಆಮೋಸ 5:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಎಲೀಷನು, “ಮೂಡಣ ದಿಕ್ಕಿಗಿರುವ ಕಿಟಕಿಯನ್ನು ತೆರೆ” ಎಂದನು. ಅವನು ತೆರೆದನು. ಅನಂತರ ಎಲೀಷನು, “ಬಾಣವನ್ನು ಎಸೆ” ಎಂದು ಆಜ್ಞಾಪಿಸಿದನು. ಅವನು ಎಸೆಯಲು ಎಲೀಷನು, “ಇದು ಜಯಪ್ರದವಾದ ಯೆಹೋವನ ಬಾಣ; ಅರಾಮ್ಯರನ್ನು ಜಯಿಸುವ ಬಾಣ. ನೀನು ಅರಾಮ್ಯರನ್ನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವಿ” ಎಂದು ಹೇಳಿದನು.

ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”

ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.