TSK

TSK · ಆಮೋಸ 6:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.

ಯೋಷೀಯನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡಗಳಲ್ಲಿ ಸಮಾಧಿಗಳನ್ನು ಕಂಡು, ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ ಆ ಯಜ್ಞವೇದಿಯ ಮೇಲೆ ಸುಟ್ಟು ಅವುಗಳನ್ನು ನಾಶಮಾಡಿದನು. ಹೀಗೆ ದೇವರ ಮನುಷ್ಯನೊಬ್ಬನು ಪ್ರಕಟಿಸಿದ ಯೆಹೋವನ ವಾಕ್ಯವು ನೆರವೇರಿತು.

ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.

ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ

ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”