TSK

TSK · ಆಮೋಸ 6:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕವನು, “ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ ಸೋತು ಗೋಳಾಡುವವರ ಧ್ವನಿಯೂ ಅಲ್ಲ, ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ” ಅಂದನು.

ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.

ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.

ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.

ನನ್ನ ಆಸ್ತಿ ದೊಡ್ಡದೆಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ,

¶ ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.

‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”

ಎಫ್ರಾಯೀಮಿಗೆ ರಕ್ಷಣೆಯಾಗಿರುವ ಕೋಟೆಯೂ, ದಮಸ್ಕವು ನಡೆಸುವ ರಾಜ್ಯಾಧಿಕಾರವೂ ಇಲ್ಲವಾಗುವವು. ಅರಾಮ್ಯರಲ್ಲಿ ಉಳಿದವರು ಇಸ್ರಾಯೇಲರ ಮಕ್ಕಳ ವೈಭವದಂತೆ ಇರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.

¶ “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.

ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.

¶ “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.›‹ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ›‹ನಿಮ್ಮ ದುಃಖವು ಹೋಗಿ ಆನಂದ ಬರುವುದು.›

ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.