ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.
TSK
TSK · ಆಮೋಸ 6:2
Treasury of Scripture Knowledge references in ಕನ್ನಡ IRV.
ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.
¶ ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
¶ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
¶ “ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?
“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
¶ ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.