TSK

TSK · ಆಮೋಸ 7:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೋವನು ಮೋಶೆಗೆ, “ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು.

¶ ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.

ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.

ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.

¶ ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.

¶ ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ ಪುಟ್ಟಿಯನ್ನು ಕಂಡೆನು!

¶ ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.