¶ “ಅದಕ್ಕೆ ತಾವು, ‘ನಾನು ಆ ಹುಡುಗನನ್ನು ನೋಡಬೇಕು ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ’ ಎಂದು ಅಪ್ಪಣೆಕೊಡಲು,
TSK
TSK · ಆಮೋಸ 9:4
Treasury of Scripture Knowledge references in ಕನ್ನಡ IRV.
¶ “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.
“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.
¶ “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.