TSK

TSK · ಕೊಲೊಸ್ಸೆಯವರಿಗೆ 1:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.

¶ ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,

¶ ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.

ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.

ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.

ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.

ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.