TSK

TSK · ಕೊಲೊಸ್ಸೆಯವರಿಗೆ 1:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?›

¶ ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.

ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

¶ ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ.

ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.

ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.

ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.