TSK

TSK · ಕೊಲೊಸ್ಸೆಯವರಿಗೆ 2:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.

ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.

ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.