TSK

TSK · ಕೊಲೊಸ್ಸೆಯವರಿಗೆ 2:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.

‹ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ› ‹ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.›

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.

ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು.