‹ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ› ‹ನಮ್ಮ›‹ತಪ್ಪುಗಳನ್ನು ಕ್ಷಮಿಸು.›
TSK
TSK · ಕೊಲೊಸ್ಸೆಯವರಿಗೆ 3:13
Treasury of Scripture Knowledge references in ಕನ್ನಡ IRV.
¶ ‹“ನಿನ್ನ ಸಹೋದರನು ನಿನ್ನ ವಿರುದ್ಧ›‹ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.›
‹ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.›
‹ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.›
‹ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ› ‹ನಮ್ಮ ಪಾಪಗಳನ್ನು ಕ್ಷಮಿಸು.› ‹ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ”› ಅಂದನು.
ಆಗ ಯೇಸು, ‹“ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು”› ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ.
ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.
ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.