TSK

TSK · ಕೊಲೊಸ್ಸೆಯವರಿಗೆ 3:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?

¶ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,

ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.

ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.