¶ “‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
TSK
TSK · ಕೊಲೊಸ್ಸೆಯವರಿಗೆ 4:1
Treasury of Scripture Knowledge references in ಕನ್ನಡ IRV.
ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.
ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.
ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ
“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.
“ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.
‹ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.›
‹ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು›
‹ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.›
ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”