TSK

TSK · ದಾನಿಯೇಲನು 1:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.

ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.

ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.