TSK

TSK · ದಾನಿಯೇಲನು 1:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಕುರುಡನಾಗಲಿ, ಕುಂಟನಾಗಲಿ, ವಿಕಾರ ಮುಖವುಳ್ಳವನಾಗಲಿ,

¶ ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.

ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.

¶ ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.

ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.

¶ ಆಗ ಆ ಪಂಡಿತರು ರಾಜನ ಸನ್ನಿಧಿಯ ಮುಂದೆ, “ರಾಜನು ಕೇಳಿದ ಸಂಗತಿಯನ್ನು ತಿಳಿಸಬಲ್ಲವನು ಲೋಕದಲ್ಲಿ ಯಾರೂ ಇಲ್ಲ; ಎಷ್ಟೇ ಬಲಿಷ್ಠನು, ಎಷ್ಟೇ ಪ್ರಬಲನು ಆದ ಯಾವ ಅರಸನೂ ಜೋಯಿಸರನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.

¶ ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು

¶ ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.

ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.