TSK

TSK · ದಾನಿಯೇಲನು 10:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.

ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.

¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.

ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.

ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.

¶ ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.