ಅದಕ್ಕೆ ಮೋಶೆಯು, “ಕರ್ತನೇ, ದಯವಿಟ್ಟು ನೀನು ಬೇರೊಬ್ಬನನ್ನು ಕಳುಹಿಸಬೇಕು” ಎಂದನು.
TSK
TSK · ದಾನಿಯೇಲನು 10:16
Treasury of Scripture Knowledge references in ಕನ್ನಡ IRV.
ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.
¶ ಮಾನೋಹನು ಇದನ್ನು ಕೇಳಿ ಯೆಹೋವನಿಗೆ, “ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು.
ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು.
ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.
ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.
ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.
ನಾನು ಏಕಾಂಗಿಯಾಗಿ ಉಳಿದು ಆ ಅದ್ಭುತ ದರ್ಶನವನ್ನು ಕಂಡು ಶಕ್ತಿಯನ್ನೆಲ್ಲಾ ಕಳೆದುಕೊಂಡೆನು, ನನ್ನ ಗಾಂಭೀರ್ಯವು ಹಾಳಾಯಿತು, ನಾನು ನಿತ್ರಾಣನಾದೆನು.
ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆ ಮಾಡಲು,
‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.