TSK

TSK · ದಾನಿಯೇಲನು 11:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.

ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.

ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.

ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.

ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.

‹ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.›

‹ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.›