TSK

TSK · ದಾನಿಯೇಲನು 11:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.

¶ ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.

“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.

ನಿನ್ನ ಹುಟ್ಟುಗೋಲನ್ನು ಬಾಷಾನಿನ ಓಕ್ ಮರದಿಂದ ಮಾಡಿ, ಕಿತ್ತೀಮ್ ದ್ವೀಪದ ಹಲಿಗೆಯಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಕೆತ್ತಿದ್ದಾರೆ.

ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.