ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
TSK
TSK · ದಾನಿಯೇಲನು 11:21
Treasury of Scripture Knowledge references in ಕನ್ನಡ IRV.
ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.
ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.
ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.
ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.
ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು, ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇಮಿಸುವನು. ಅವನು ಕೆಲವು ದಿನಗಳೊಳಗೆ ನಾಶವಾಗುವನು. ಅವನ ನಾಶ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.
ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.