ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.
TSK
TSK · ದಾನಿಯೇಲನು 11:33
Treasury of Scripture Knowledge references in ಕನ್ನಡ IRV.
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.›
ಆಗ ಆತನು ಅವರಿಗೆ, ‹“ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು”› ಎಂದು ಹೇಳಿದನು.
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.
‹ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.›
ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
¶ ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
‹ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.›‹ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.›
ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.
ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.