ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
TSK
TSK · ದಾನಿಯೇಲನು 12:10
Treasury of Scripture Knowledge references in ಕನ್ನಡ IRV.
ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
¶ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.
ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
¶ ಯೇಸು ಅವರಿಗೆ, ‹“ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,›
‹ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ”› ಎಂದು ಹೇಳಿದನು.
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
¶ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
‹ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,›‹ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ›‹ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ›‹ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.›
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).
ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”