TSK

TSK · ದಾನಿಯೇಲನು 2:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಗುಡ್ಡೆಗೆ ಲಾಬಾನನು “ಯಗರಸಾಹದೂತ” ಎಂದೂ ಯಾಕೋಬನು “ಗಲೇದ್” ಎಂದೂ ಹೆಸರಿಟ್ಟರು.

ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.

ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು.

ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.

ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.

¶ “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.

¶ ಆಸ್ಥಾನದ ವಿದ್ವಾಂಸರೆಲ್ಲರು ಬಂದು ನೋಡಿದರು; ಆದರೆ ಆ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.

¶ ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!

¶ ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!

ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;