ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಹಾಗು ಗಂಡುಹೆಣ್ಣು ಮಕ್ಕಳ ಕಿವಿಯಲ್ಲಿ ಹಾಕಿಕೊಂಡಿರುವ ಚಿನ್ನದ ಓಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ” ಎಂದು ಹೇಳಿದನು.
TSK
TSK · ದಾನಿಯೇಲನು 3:1
Treasury of Scripture Knowledge references in ಕನ್ನಡ IRV.
¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.
¶ ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.
ಅನ್ಯಜನಗಳ ವಿಗ್ರಹಗಳು ಬೆಳ್ಳಿ ಮತ್ತು ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.
¶ ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.
ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.
ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.
¶ “ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.