TSK

TSK · ದಾನಿಯೇಲನು 3:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.

ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.

ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.

¶ ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.

ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.