TSK

TSK · ದಾನಿಯೇಲನು 4:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.

ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.

ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.