TSK

TSK · ದಾನಿಯೇಲನು 5:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.

ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.

ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.

ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,

ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.

ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.

ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.