TSK

TSK · ದಾನಿಯೇಲನು 5:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’

ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.

ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.

¶ ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.