TSK

TSK · ದಾನಿಯೇಲನು 6:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.

¶ ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಬಳಿಗೆ ಶೀಘ್ರವಾಗಿ ಕರೆದುಕೊಂಡು ಹೋಗಿ, “ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ” ಎಂದು ಅರಿಕೆಮಾಡಿದನು.

¶ “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.

¶ ಆಗ ದಾನಿಯೇಲನನ್ನು ರಾಜನ ಬಳಿ ಬರಮಾಡಲು ರಾಜನು ಅವನಿಗೆ, “ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲ್ ಎಂಬುವನು ನೀನೋ?

ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು.