ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.
TSK
TSK · ದಾನಿಯೇಲನು 6:22
Treasury of Scripture Knowledge references in ಕನ್ನಡ IRV.
ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,
ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?
ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.
ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.
ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,
ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.
ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.
¶ ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
ಸುಮಾರು ಮೂರು ಘಂಟೆಗೆ ಯೇಸು, ‹“ಏಲೀ, ಏಲೀ, ಲಮಾ ಸಬಕ್ತಾನೀ”› ಅಂದರೆ, ‹“ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ”› ಎಂದು ಮಹಾ ಧ್ವನಿಯಿಂದ ಕೂಗಿದನು.
¶ ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.
ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.
ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,