ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,
TSK
TSK · ದಾನಿಯೇಲನು 6:27
Treasury of Scripture Knowledge references in ಕನ್ನಡ IRV.
ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ
ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
¶ ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ, “ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;
¶ ‹“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;›
ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.