TSK

TSK · ದಾನಿಯೇಲನು 7:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.

ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.

¶ ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.

ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.

ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.

ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.