ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
TSK
TSK · ದಾನಿಯೇಲನು 7:27
Treasury of Scripture Knowledge references in ಕನ್ನಡ IRV.
ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.
ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.
ಜನಾಂಗಗಳ ಐಶ್ವರ್ಯವನ್ನು ನಿನ್ನಲ್ಲಿಗೆ ತರುತ್ತಿರುವರು. ಅವುಗಳ ಅರಸರು ಮೆರವಣಿಗೆಯಾಗಿ ಬರುತ್ತಿರುವರು; ಇದರಿಂದ ನಿನ್ನ ಬಾಗಿಲುಗಳು ಹಗಲಿರುಳೂ ಮುಚ್ಚದೆ ಸದಾ ತೆರೆದಿರುವವು.
¶ ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.
ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು.
¶ ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.
ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ‹ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು› ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”
¶ ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.