TSK

TSK · ದಾನಿಯೇಲನು 7:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.

ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.

ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.

¶ ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.

ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.

ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?

ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.

“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.

ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.

¶ ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.

ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.

ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.