TSK

TSK · ದಾನಿಯೇಲನು 8:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.

¶ “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.

ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.

ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.

ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.

ನಿಬಂಧನ ದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.

ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”

ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”

¶ ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.