TSK

TSK · ದಾನಿಯೇಲನು 9:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.

ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.

¶ “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.

ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.

ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,

ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.

ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.

ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?

ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.

ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.

“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.

¶ ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.