TSK

TSK · ಧರ್ಮೋಪದೇಶಕಾಂಡ 1:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.

ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.

¶ ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.

¶ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.

ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.

ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.

ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.

ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.