¶ ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.
TSK
TSK · ಧರ್ಮೋಪದೇಶಕಾಂಡ 1:7
Treasury of Scripture Knowledge references in ಕನ್ನಡ IRV.
ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
¶ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು.
ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.
¶ ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ
¶ ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ್ಯ ಗೋಷೆನ್ ಸೀಮೆ, ಇಳಿಜಾರಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.
ಪೂರ್ವ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ. ಇವರಿಗೆ ಗಿಲ್ಯಾದ್ ದೇಶದಲ್ಲಿ ಅನೇಕ ದನ ಕುರಿಹಿಂಡುಗಳಿದ್ದವು.
ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು,