ವಿಮೋಚನಕಾಂಡ 20:1
TSK
¶ ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
TSK
Treasury of Scripture Knowledge references in ಕನ್ನಡ IRV.
¶ ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.
ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.
ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.
ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.