TSK

TSK · ಧರ್ಮೋಪದೇಶಕಾಂಡ 11:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.

ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.

¶ ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.

¶ ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.