TSK

TSK · ಧರ್ಮೋಪದೇಶಕಾಂಡ 12:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ,

¶ ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.

ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.

ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು.

ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.

¶ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.

ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’