ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
TSK
TSK · ಧರ್ಮೋಪದೇಶಕಾಂಡ 12:21
Treasury of Scripture Knowledge references in ಕನ್ನಡ IRV.
ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.
ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.
ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.