TSK

TSK · ಧರ್ಮೋಪದೇಶಕಾಂಡ 12:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.

ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.

ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.

ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.

ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.

ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.