TSK

TSK · ಧರ್ಮೋಪದೇಶಕಾಂಡ 13:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.

ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.

¶ ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.

ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.

ಇಸ್ರಾಯೇಲರು ಕೂಡಿಕೊಂಡು ಮಿಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, “ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ” ಎಂದು ಕೇಳಲು

ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.

ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.