TSK

TSK · ಧರ್ಮೋಪದೇಶಕಾಂಡ 13:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.

¶ ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.

ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.

‹ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.›

¶ ‹“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.›