ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
TSK
TSK · ಧರ್ಮೋಪದೇಶಕಾಂಡ 17:7
Treasury of Scripture Knowledge references in ಕನ್ನಡ IRV.
ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು.
ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.
¶ ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
¶ ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.
ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.