ಅರಣ್ಯಕಾಂಡ 35:12
TSK
ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.
TSK
Treasury of Scripture Knowledge references in ಕನ್ನಡ IRV.
ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.
ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.
ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.