¶ ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.
TSK
TSK · ಧರ್ಮೋಪದೇಶಕಾಂಡ 2:29
Treasury of Scripture Knowledge references in ಕನ್ನಡ IRV.
ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.
¶ ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,
¶ “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
¶ ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.
ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.
“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.